November 22, 2024

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಗಳಲ್ಲಿ ವಿಶೇಷ ತನಿಖಾ ತಂಡ (SIT) ಪರ ವಾದಿಸುತ್ತಿರುವ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (SPP) ಬಿಎನ್ ಜಗದೀಶ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರಿಂದಾಗಿ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆಯುಂಟಾಗಿದೆ.

ಎಸ್‌ಐಟಿ ರಚನೆಯಾಗಿರುವ ಅಪರಾಧ ತನಿಖಾ ವಿಭಾಗದ (CID) ಮುಖ್ಯಸ್ಥರಿಗೆ ಅವರ ರಾಜೀನಾಮೆಯನ್ನು ದೃಢಪಡಿಸಿದ ಮೂಲಗಳು, ವಿಚಾರಣಾ ನ್ಯಾಯಾಲಯ ಮತ್ತು ಸೆಷನ್‌ಗಳ ಮುಂದೆ ಪ್ರಾಸಿಕ್ಯೂಷನ್ ನ್ನು ಸಮರ್ಥಿಸಲು ರಾಜ್ಯ ಸರ್ಕಾರವು ಇಬ್ಬರು ಹಿರಿಯ ವಕೀಲರನ್ನು ಹೆಚ್ಚುವರಿ ಎಸ್‌ಪಿಪಿಗಳಾಗಿ ನೇಮಿಸಿದ ನಂತರ ಜಗದೀಶ್ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ನ್ಯಾಯಾಲಯ ವ್ಯವಹರಿಸುತ್ತದೆ.

ಹೆಚ್ಚುವರಿ ಎಸ್‌ಪಿಪಿಗಳ ನೇಮಕ;

ಹಿರಿಯ ವಕೀಲರಾದ ಅಶೋಕ್ ಎನ್ ನಾಯಕ್ ಮತ್ತು ಜಯ್ನಾ ಕೊಠಾರಿ ಅವರನ್ನು ಹೆಚ್ಚುವರಿ ಎಸ್‌ಪಿಪಿಗಳಾಗಿ ಸರ್ಕಾರ ನೇಮಿಸಿದೆ. ಈ ಎರಡು ನೇಮಕಾತಿಗಳು ತನ್ನದೇ ಆದ ಕಾರಣಗಳಿಗಾಗಿ ಜಗದೀಶ ಅವರನ್ನು ಬದಲಾಯಿಸಲು ರಾಜ್ಯ ಸರ್ಕಾರ ನಡೆಸಿದ ಪ್ರಯತ್ನವಾಗಿದೆ ಎಂದು ಮೂಲಗಳು ತಿಳಿಸಿವೆ.

ಆದರೆ, ಯಾವುದೇ ಸಕಾರಣವಿಲ್ಲದೇ ಏಕಾಏಕಿ ಬದಲಾವಣೆ ಮಾಡಿದರೆ ತಪ್ಪು ಸಂದೇಶ ಬರಲಿದೆ ಎಂದು ಮನಗಂಡ ರಾಜ್ಯ ಸರ್ಕಾರ, ಬದಲಿ ಅಧಿಸೂಚನೆ ಹೊರಡಿಸುವ ಮುನ್ನವೇ ಹಿಂಪಡೆದಿದ್ದು, ಇಬ್ಬರು ಹಿರಿಯ ವಕೀಲರನ್ನು ಹೆಚ್ಚುವರಿ ಎಸ್‌ಪಿಪಿಗಳನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ.

ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸುತ್ತಿದ್ದ ವಿಶೇಷ ನ್ಯಾಯಾಲಯ ಹಾಗೂ ಶಾಸಕರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಎಸ್‌ಐಟಿ ಪರವಾಗಿ ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಜಗದೀಶ ಹಾಜರಾಗಿದ್ದರು.

Leave a Reply

Your email address will not be published. Required fields are marked *