August 19, 2025
n6073234961715319821818a9cf5af0486f5b0cd9bf272a7aa4e50c3f4ebe639a670eb84427010e60b659a7

ಸೋಮವಾರಪೇಟೆ (ಮಡಿಕೇರಿ): ತನ್ನ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯೊಬ್ಬಳನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ (Murder Case) ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ. ಕೊಲೆ ಮಾಡಿದ ಹುಚ್ಚ ಪ್ರೇಮಿಯನ್ನು ವಿರೂಪಾಕ್ಷ ಎಂದು ಗುರುತಿಸಲಾಗಿದೆ.
ಮೀನಾ ಕೊಲೆಯಾಗಿರುವ ಬಾಲಕಿ. ಮಧ್ಯಾಹ್ನ ಪೊಲೀಸರ ಸಮ್ಮುಖದಲ್ಲಿ ಮದುವೆ ನಿಶ್ಚಿತಾರ್ಥ ರದ್ದಾಗಿದ್ದರೆ ಸಂಜೆ ವೇಳೆ ಆಕೆಯ ಮನೆಗೆ ನುಗ್ಗಿದ ಆರೋಪಿ ವಿರೂಪಾಕ್ಷ ಆಕೆಯನ್ನು ಎಳೆದೊಯ್ದು ಕತ್ತು ಕೊಯ್ದು ದೇಹವನ್ನು ಬಿಸಾಡಿ ರುಂಡ ಕೊಂಡೊಯ್ದಿದ್ದಾನೆ. ಭೀಕರ ಘಟನೆಯು ಈ ಪ್ರದೇಶದ ಜನರನ್ನು ಬೆಚ್ಚಿ ಬೀಳಿಸಿದೆ.

ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಮದುವೆ ರದ್ದು ಮಾಡಲಾಗಿತ್ತು. ಆಕೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದು ಗುರುವಾರವಷ್ಟೇ ಫಲಿತಾಂಶ ಪ್ರಕಟಗೊಂಡಿತ್ತು. ಇದೇ ವೇಳೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಆಕೆಯ ಮದುವೆ ನಿಶ್ಚಿತಾರ್ಥವನ್ನು ರದ್ದು ಮಾಡಲಾಗಿತ್ತು. ಪೊಲೀಸರೇ ಮುಂದೆ ನಿಂತು ಮದುವೆಯನ್ನು ಕೊನೆಗೊಳಿಸಿದ್ದರು. ಆದರೆ ಸಂಜೆ ವೇಳೆಗೆ ಆಕೆಯನ್ನು ಎಳೆದೊಯ್ದು ಕೊಲೆ ಮಾಡಿದ್ದಾನೆ ಆರೋಪಿ ವಿರೂಪಾಕ್ಷ.

ಬಾಲಕಿಯನ್ನು ಆರೋಪಿ ವಿರೂಪಾಕ್ಷ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ, ಅವರ ಮದುವೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ಬಾಲಕಿಗೆ ಮದುವೆಯ ಕಾನೂನುಬದ್ಧ ವಯಸ್ಸಾಗದ ಕಾರಣ ಪೊಲೀಸರು ಅದಕ್ಕೆ ತಡೆಯೊಡ್ಡಿದ್ದರು ಎನ್ನಲಾಗಿದೆ. ಇದರಿಂದ ಆರೋಪಿ ಕೆರಳಿದ್ದ. ಸಂಜೆ ವೇಳೆ ಬಾಲಕಿಯ ಮನೆಗೆ ನುಗ್ಗಿದ ಆತ ಅಲ್ಲಿಂದ ಎಳೆದೊಯ್ದಿದ್ದ. ಬಳಿಕ ಕತ್ತು ಕತ್ತರಿಸಿ ಕೊಲೆ ಮಾಡಿ ರುಂಡವನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.

Leave a Reply

Your email address will not be published. Required fields are marked *