
ಹುಬ್ಬಳ್ಳಿ : ಜನನಿ ಬೀಡ ಪ್ರದೇಶವಾಗಿರುವ ಕುಂದಗೋಳ ಕ್ರಾಸ್ ಬಸ್ ನಿಲ್ದಾಣದಲ್ಲಿಯೇ ಪೆಟ್ಟಿಗೆ ಅಂಗಡಿಯಲ್ಲಿ ಅಕ್ರಮ ಮಧ್ಯ ಮಾರಾಟ ಭರ್ಜರಿಯಾಗಿ ನಡೆಯುತ್ತಿದೆ. ಇದರಿಂದ ಮಹಿಳಾ ಪ್ರಯಾಣಿಕರಿಗೆ ಕಿರಿಕಿರಿ ಉಂಟಾಗುತ್ತಿದ್ದು ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.
ಬಸ್ ನಿಲ್ಲುವ ಸ್ಥಳದಲ್ಲಿಯೇ ರಸ್ತೆಯ ಪಕ್ಕದ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿರುವುದರಿಂದ ವಿದ್ಯಾರ್ಥಿನಿಯರು ಹಾಗು ಮಹಿಳೆಯರು ಮುಜುಗುರ ಪಡುವಂತೆ ಆಗಿದ್ದು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ಗ್ರಾಮ ಪಂಚಾಯತ ಮುಖಂಡರಿಗೆ ಕೂಡ ಮನವಿ ಮಾಡಿದ್ದಾರೆ.
ಸಂಬಂಧಪಟ್ಟ ಅಬಕಾರಿ ಇಲಾಖೆ ಹಾಗು ಪೊಲೀಸ್ ಇಲಾಖೆ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಈ ಬಗ್ಗೆ ಕ್ರಮ ಕೈಗೊಳ್ಳುವರೆ ಎಂದು ಕಾದು ನೋಡಬೇಕಿದೆ