July 11, 2025
IMG_20240511_080201

ಅಣ್ಣಿಗೇರಿ: ತೇರಿನ ಚಕ್ರಕ್ಕೆ ವ್ಯಕ್ತಿಯೋರ್ವ ಸಿಲುಕಿ ಸಾವನ್ನಪ್ಪಿರುವ ಘಟನೆ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ಸಂಭವಿಸಿದೆ.

ಬಸವ ಜಯಂತಿ ಹಿನ್ನೆಲೆ ಮಜ್ಜಿಗುಡ್ಡ ಗ್ರಾಮದಲ್ಲಿ ಬಸವೇಶ್ವರ ಜಾತ್ರಾ ಮಹೋತ್ಸವ ನಡೆದಿತ್ತು. ಸಂಜೆ ಸಾವಿರಾರು ಭಕ್ತರ ಮಧ್ಯೆ ರಥೋತ್ಸವ ಕೂಡ ನಡೆದಿತ್ತು.

ತೇರು ಎಳೆಯುತ್ತಿದ್ದಂತೆ ಅಲ್ಲಿ ಸೇರಿದ್ದ ಭಕ್ತರು ತೇರಿಗೆ ಉತ್ತುತ್ತಿ ಹಣ್ಣುಗಳನ್ನು ತೂರಲಾರಂಭಿಸಿದರು. ಈ ವೇಳೆ ಬಾಬಾಸಾಬ್ ಮುಕಾಶಿ ಎಂಬಾತ ಉತ್ತುತ್ತಿ ಹಣ್ಣುಗಳನ್ನು ಆರಿಸಿಕೊಳ್ಳಲು ತೇರಿನ ಹತ್ತಿರ ಧಾವಿಸಿದ ವೇಳೆ ತೇರಿನ ಚಕ್ರಕ್ಕೆ ಸಿಲುಕಿದ್ದಾನೆ. ಇದರಿಂದ ಆತನ ತಲೆಗೆ ಗಂಭೀರ ಸ್ವರೂಪದ ಗಾಯವಾಗಿತ್ತು. ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾನೆ.

ಈ ಸಂಬಂಧ ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Reply

Your email address will not be published. Required fields are marked *