ಹುಬ್ಬಳ್ಳಿ: ನಗರದಾದ್ಯಂತ ಇಂದು ಮಧ್ಯಾಹ್ನದಿಂದ ಮಳೆರಾಯನ ಆಗಮನದಿಂದ ಅವಳಿ ನಗರಗಳಾದ ಹುಬ್ಬಳ್ಳಿ ಧಾರವಾಡದಲ್ಲಿ ಗುಡುಗು ಸಹಿತ ಮಳೆ ಸುರಿಯಿತು. ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಬಿಸಿಲಿನ ಬೇಗೆಯಿಂದ ಬಳಲುತ್ತಿದ್ದ ಜನತೆಗೆ, ಮಳೆ ತುಸು ತಂಪನೆರೆಯಿತು. ಮಾರುಕಟ್ಟೆಗೆ ಬಂದವರು ಏಕಾಏಕಿ ಸುರಿದ ಮಳೆಯಿಂದ ಪರದಾಡಿದರು. ಬೈಕ್ ಸವಾರರು ನೆನೆಯುತ್ತಲೇ ಸಂಚರಿಸಿದ ದೃಶ್ಯ ಕಂಡು ಬಂದಿತು.
ಚನ್ನಮ್ಮ ವೃತ್ತ, ಜನತಾ ಬಜಾರ್ ಸೇರಿದಂತೆ ವಿವಿಧೆಡೆ, ಬೀದಿ ಬದಿ ವ್ಯಾಪಾರಿಗಳು ತರಕಾರಿ ಮತ್ತು ಹಣ್ಣುಗಳನ್ನು ಮಳೆಯಿಂದ ರಕ್ಷಿಸಿಕೊಳ್ಳಲು ಪರದಾಡಿದರು. .