ಹಾಸನ: ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಂಧಿತರಾಗಿದ್ದ ಹಾಸನದ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ದೇವರಾಜೇಗೌಡ ಅವರನ್ನು ನಿನ್ನೆ ಚಿತ್ರದುರ್ಗದ ಹಿರಿಯೂರು ಬಳಿ ಸ್ಥಳೀಯ ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಅವರನ್ನು ಹೊಳೆನರಸೀಪುರ ಪೊಲೀಸರಿಗೆ ಹಸ್ತಾಂತರಿಸಲಾಗಿತ್ತು. ಈ ವೇಳೆ ಲೈಂಗಿಕ ದೌರ್ಜನ್ಯದ ಕೇಸ್‌ನಲ್ಲಿ ಅವರನ್ನು ಪೊಲೀಸರು ಬಂಧಿಸಿ, ಹೊಳೆನರಸೀಪುರ ಪಟ್ಟಣದ ಅರಕಲಗೂಡು ರಸ್ತೆಯಲ್ಲಿರೋ ನ್ಯಾಯಾಧೀಶರ ಮನೆಯಲ್ಲಿ ನ್ಯಾಯಾಧೀಶರೆದುರು ಹಾಜರುಪಡಿಸಲಾಗಿತ್ತು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರು, ದೇವರಾಜೇಗೌಡರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದಾರೆ.
ಹಾಸನ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯದ ಕೇಸ್ ಮೇಲೆ ದೇವರಾಜೇಗೌಡನನ್ನು ಪೊಲೀಸರು ಬಂಧಿಸಿದ್ದರು. ಈ ಕೇಸ್‌ನಲ್ಲಿ ಇದೀಗ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.