ಬೆಂಗಳೂರು: ನಗರದ ಹಲವು ಶಾಲೆಗಳಿಗೆ ಈಗಾಗಲೇ ಬಾಂಬ್ ಬೆದರಿಕೆ ಹಾಕಲಾಗಿತ್ತು. ಈಗ ಬೆಂಗಳೂರಿನ ಪ್ರತಿಸ್ಠಿತ ಆಸ್ಪತ್ರೆಯೊಂದಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿರುವಂತದ್ದು ಬೆಳಕಿಗೆ ಬಂದಿದೆ.
ಬೆಂಗಳೂರಿನ ಹತ್ತಾರು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಗಳಿಂದ ರಾಜ್ಯದ ರಾಜಧಾನಿ ಜನರು, ಶಾಲಾ ಮಕ್ಕಳ ಪೋಷಕರು ಬೆಚ್ಚಿ ಬಿದ್ದಿದ್ದರು.
ಬೆಂಗಳೂರಿನ ನಾಗಾವಾರದಲ್ಲಿರುವಂತ ಸೇಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಬೆಂಗಳೂರು ಪೊಲೀಸರ ಅಕೌಂಟ್ ಖಾತೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಪೊಲೀಸ್ ಇಲಾಖೆಯ ಸಿಟಿ ಎಸ್ ಬಿಗೆ ಬಂದಿದ್ದಂತ ಇ-ಮೇಲ್ ನಿಂದಾಗಿ ತಕ್ಷಣವೇ ಕಾರ್ಯಪ್ರವೃತ್ತರಾದರು.
ನಾಗವಾರದ ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ಶ್ವಾನದಳ, ಬಾಂಬ್ ನಿಷ್ಕ್ರೀಯ ದಳದ ಅಧಿಕಾರಿಗಳು ಭೇಟಿ ನೀಡಿ, ಇಡೀ ಆಸ್ಪತ್ರೆಯನ್ನು ಪರಿಶೀಲನೆ ನಡೆಸಿದರು. ಆದ್ರೇ ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಅಂತ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.