
ಹುಬ್ಬಳ್ಳಿ: ಯುವಕನನ್ನು ನಿನ್ನ ಜೊತೆ ಮಾತನಾಡಬೇಕು ಬಾ ಎಂದು ಶಾಲೆಯೊಂದಕ್ಕೆ ಕರೆಸಿಕೊಂಡು ಕತ್ತಲಲ್ಲಿ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಹಳಿಯಾಳ ಗ್ರಾಮದಲ್ಲಿ ನಡೆದಿದೆ.
ಸದ್ದಾಂ (ಶರೀಫ್‌ಸಾಬ್) ಅರಿಸಣಗಿರಿ ಕೊಲೆಯಾದ ಯುವಕ. ಹುಬ್ಬಳ್ಳಿ ತಾಲೂಕಿನ ಹಳಿಯಾಳ ಗ್ರಾಮದ ನಿವಾಸಿಯಾದ ಶರೀಫ್‌ಸಾಬ್ ಅರಸಣಗಿರಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಯುವಕನನ್ನು ನಿನ್ನ ಜೊತೆ ಮಾತನಾಡುವುದಿದೆ ಶಾಲೆ ಹತ್ತಿರ ಬಾ ಎಂದು ಕರೆದಿದ್ದರು. ಬಳಿಕ ಶರೀಫ್‌ಸಾಬ್‌ನನ್ನು ಗ್ರಾಮದ ಶಾಲೆಯೊಂದರಲ್ಲಿ ಕರೆದುಕೊಂಡು ಹೋಗಿ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ವ್ಯಕ್ತಿ ಶವವನ್ನೂ ವೈದ್ಯಕೀಯ ಪರೀಕ್ಷೆಗೆ ರವಾನಿಸಿದ್ದಾರೆ. ಇನ್ನೂ ಕೊಲೆಯಾದ ಸ್ಥಳ ಪೊಲೀಸ್ ಭದ್ರತೆ ನೀಡಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸರು ದೂರು ದಾಖಲಿಸಿಕೊಂಡು ಹಂತಕರ ಪತ್ತೆಗೆ ಜಾಲ ಬೀಸಿದ್ದಾರೆ.