August 19, 2025
n608189038171559343081871ac09ab5729223f851aa196bda93066703446758e2e1b5537692b1f012dae74

ನಂಜನಗೂಡು: ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಬಸವನಪುರ ಗ್ರಾಮದ ಬಳಿ ನಡೆದಿದೆ.

ಕರ್ಣ (19) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಪತ್ರಿಕಾ ವಿತರಕನಾಗಿ ಕರ್ಣ ಕೆಲಸ ಮಾಡುತ್ತಿದ್ದನು. ಸೂಕ್ತ ಕೆಲಸವಿಲ್ಲದೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.
ವಿಷಯ ತಿಳಿದು ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ರೈಲ್ವೆ ಪೊಲೀಸರು ಪ್ರಕರಣವನ್ನು ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *