August 18, 2025
180775-pm-modi-number-game

ವಾರಣಾಸಿ: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಬೆಳಗ್ಗೆ 11:40ರ ಶುಭ ಮುಹೂರ್ತದಲ್ಲಿ ಮೋದಿ ನಾಮಪತ್ರ ಸಲ್ಲಿಸುವರು. ನಾಮಪತ್ರ ಸಲ್ಲಿಕೆಗೆ ಮೊದಲು ಕಾಶಿಯ ಕೊತ್ವಾಲ್ ಕಾಲಭೈರವನ ಆಶೀರ್ವಾದ ಪಡೆಯಲಿದ್ದಾರೆ.
ಈ ದಿನ ಅಭಿಜಿತ್ ಮುಹೂರ್ತ, ಆನಂದ ಯೋಗ, ಸರ್ವಾರ್ಥಸಿದ್ಧಿ ಯೋಗ ಜೊತೆಗೆ ಭೌಮ ಪುಷ್ಯ ನಕ್ಷತ್ರದ ಕಾಕತಾಳೀಯ ಸಂಗಮವಾಗಿದ್ದು, ಇದು ಉತ್ತಮ ಮಹತ್ವದ ದಿನ ಎಂದು ಅಯೋಧ್ಯ ರಾಮ ಮಂದಿರ ಶಂಕುಸ್ಥಾಪನೆಗೆ ಶುಭ ಮುಹೂರ್ತ ನೀಡಿದ್ದ ಪಂಡಿತ್ ಗಣೇಶ್ವರ ಶಾಸ್ತ್ರಿ ದ್ರಾವಿಡ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *