August 18, 2025
1700221768

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜನವರಿಯಲ್ಲಿ ಉದ್ಘಾಟಿಸಿದ ಅಟಲ್ ಬಿಹಾರಿ ವಾಜಪೇಯಿ ಸೇವಾರಿ-ನವಾ ಶೇವಾ ಅಟಲ್ ಸೇತು ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಮಾತನಾಡಿದ್ದಾರೆ. ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ, ಇದು ಮುಂಬೈನ ಸಾರಿಗೆ ಜಾಲಕ್ಕೆ ಗೇಮ್ ಚೇಂಜರ್ ಆಗಿದೆ ಎಂದು ಅವರು ಹೇಳಿದರು.
ಪ್ರಧಾನಿಯನ್ನು ಶ್ಲಾಘಿಸಿದ ಅವರು ‘ಭಾರತ ಎಲ್ಲಿಯೂ ನಿಲ್ಲುವುದಿಲ್ಲ’ ಎಂದು ಹೇಳಿದರು.
ಅಟಲ್ ಸೇತು ಬಗ್ಗೆ ಮಾತನಾಡಿದ ರಶ್ಮಿಕಾ, “ಎರಡು ಗಂಟೆಗಳ ಪ್ರಯಾಣವನ್ನು 20 ನಿಮಿಷಗಳಲ್ಲಿ ಮಾಡಬಹುದು. ಇದು ನನಗೆ ಹೆಮ್ಮೆ ತಂದಿದೆ ಅಂಥ ಹೇಳಿದರು.
ಯುವ ಭಾರತ ಎಂಥಾ ವೇಗದಲ್ಲಿ ಬೆಳೆಯುತ್ತಿದೆ ನೋಡಿ ಎಂದು ರಶ್ಮಿಕಾ ಹೇಳಿದ್ದಾರೆ. ಇಂದಿನ ಯುವಕರು ಬಹಳ ಜವಾಬ್ದಾರಿಯುತರಾಗಿದ್ದಾರೆ. ನೀವು ಏನು ಹೇಳಿದರೂ ಅದರಿಂದ ಪ್ರಭಾವಿತರಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಬದಲಾವಣೆಗಳನ್ನು ಜನರು ನಿಜವಾಗಿಯೂ ನೋಡುತ್ತಿದ್ದಾರೆ. ಇದರಿಂದಾಗಿಯೇ ಜನರು ತುಂಬಾ ಜವಾಬ್ದಾರಿಯುತರಾಗಿದ್ದಾರೆ ಮತ್ತು ದೇಶವು ‘ಸರಿಯಾದ ದಾರಿಯಲ್ಲಿ ಸಾಗುತ್ತಿದೆ’ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *