October 18, 2024

ಬೀದರ್: ಬಸ್ ಸೀಟಿಗಾಗಿ ಇಬ್ಬರು ಮಹಿಳೆಯರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.
ಬೀದರ್‌ನಿಂದ ಕಲಬುರಗಿಗೆ ತೆರಳುವ ಬಸ್‌ನಲ್ಲಿ ಈ ಘಟನೆ ನಡೆದಿದೆ. ಓರ್ವ ಮಹಿಳೆ, “ಸೀಟು ಬಿಡು, ಇದು ನನ್ನದು” ಎಂದು ಹೇಳಿದ್ದರೆ ಮತ್ತೊಬ್ಬಳು, “ನಾನು ಸೀಟ್‌ ಬಿಡಲ್ಲ. ಏನ್‌ ಮಾಡ್ತಿ” ಎಂದು ಪ್ರಶ್ನೆ ಮಾಡಿದ್ದಾಳೆ ಎನ್ನಲಾಗಿದ್ದು, ಈ ನಡುವೆ ಇಬ್ಬರ ನಡುವೆ ಮಾರಾಮಾರಿ ನಡೆದಿದೆ. . ಗಲಾಟೆ ಜೋರಾಗುತ್ತಿದ್ದಂತೆ ಓರ್ವ ಮಹಿಳೆ ತನ್ನ ಚಪ್ಪಲಿ ತೆಗೆದು ಜಗಳ ಮಾಡುತ್ತಿದ್ದ ಮಹಿಳೆ ಹೊಡೆದಿದ್ದಾಳೆ.
ಚಪ್ಪಲಿ ಹಲ್ಲೆ ಬಳಿಕ ಮೈಮೇಲೆ ಹಾಕಿದ ಬಟ್ಟೆ ಹಿಡಿದು ಮಹಿಳೆಯರು ಎಳೆದಾಡಿಕೊಂಡಿದ್ದಾರೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

Leave a Reply

Your email address will not be published. Required fields are marked *