August 18, 2025
1600x960_1031747-police-suspension

ಹುಬ್ಬಳ್ಳಿ: ಕರ್ತವ್ಯ ನಿರ್ಲಕ್ಷ್ಯ ಧೋರಣೆ ಆರೋಪದ ಮೇಲೆ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಹಾಗೂ ಒರ್ವ ಸಿಬ್ಬಂದಿಯನ್ನು ಅಮಾನತು ಮಾಡಿ ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಆದೇಶ ಹೊರಡಿಸಿದ್ದಾರೆ.

ಬುಧವಾರ ಬೆಳ್ಳಂಬೆಳ್ಳಿಗೆ ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ವಿಶ್ವನಾಥ ಅಲಿಯಾಸ್ ಗಿರೀಶ್ ಸಾವಂತ ಎಂಬಾತ ಮನೆಗೆ ನುಗ್ಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿಶ್ವನಾಥ ಪ್ರೀತಿ ವಿಚಾರಕ್ಕೆ ಪೀಡಿಸಿ ಒಪ್ಪದಿದ್ದಾಗ ನೇಹಾ ಹಿರೇಮಠ ಮಾದರಿಯಲ್ಲಿಯೇ ನಿನ್ನ ಸ್ಥಿತಿಯಾಗುತ್ತದೆ ಎಂದು ಬೆದರಿಕೆ ಹಾಕಿದ್ದ, ಭೀತಿಗೊಂಡಿದ್ದ ಅಂಜಲಿ ಕುಟುಂಬಸ್ಥರು ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಆರೋಪಿ ವಿಶ್ವನಾಥ ವಿರುದ್ಧ ಪ್ರಕರಣ ದಾಖಲು ಮಾಡಲು ಹೋದಾಗ ಇವೆಲ್ಲಾ ಮೂಡನಂಬಿಕೆ ಎಂದು ಹೇಳಿ ಕಳಿಸಿ ಕರ್ತವ್ಯ ನಿರ್ಲಕ್ಷ್ಯ ತೋರಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ನಿಟ್ಟಿನಲ್ಲಿ ಅಂದು ಪ್ರಕರಣ ದಾಖಲಿಸಿದ್ದರೇ ಈ ಅವಘಡ ಸಂಭವಿಸುತ್ತಿರಲಿಲ್ಲ ಎಂದು ಅಂಜಲಿ ಕುಟುಂಬಸ್ಥರು ಗಂಭೀರವಾಗಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಪೋಲಿಸ್ ಆಯುಕ್ತೆ ರೇಣುಕಾ ಸುಕುಮಾರ ಅವರು ತನಿಖೆಗೆ ಸೂಚನೆ ನೀಡಿದ್ದರು. ಆದರೆ ಇದೀಗ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಚಿಕ್ಕೋಡಿ ಹಾಗೂ ಸಿಬ್ಬಂದಿ ರೇಖಾ ಹಾವರಡ್ಡಿ ಎಂಬವರನ್ನು ಅಮಾನತು ಮಾಡಿದ್ದಾರೆ.

Leave a Reply

Your email address will not be published. Required fields are marked *