
ಬೆಂಗಳೂರು: ನಗರದಲ್ಲಿ ಯುವತಿಯೊಬ್ಬಳ ಅನುಮಾನಾಸ್ಪದ ಸಾವು ಎಲ್ಲರನ್ನು ಬೆಚ್ಚಿ ಬೀಳಿಸಿದೆ. 21 ವರ್ಷ ವಯಸ್ಸಿನ ಪ್ರಭುದ್ಧ ಎಂಬ ಯುವತಿ ಸಾವನ್ನಪ್ಪಿದ್ದಾಳೆ.
ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುದ್ಯಾ, ಮನೆಯ ಬಾತ್ ರೂಂನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.
ಆಕೆಯ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.
ಪ್ರಭುಧ್ಯಾಳ ಸಾವು ಆಕಸ್ಮಿಕವೋ ಅಥವಾ ಆತ್ಮಹತ್ಯೆಯೋ, ಕೊಲೆಯೋ ಹೀಗೆ ಎಲ್ಲ ಆಯಾಮದಲ್ಲೂ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಯುಡಿಆರ್ ದಾಖಲಿಸಿಕೊಂಡು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ.
ಇತ್ತ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಗಳನ್ನು ಜೋಪಾನ ಮಾಡಿದ್ದೆ ಯಾರೋ ಕ್ರೂರವಾಗಿ ನನ್ನ ಮಗಳನ್ನು ಕೊಲೆ ಮಾಡಿದ್ದಾರೆ ಎಂದು ತಾಯಿ ಸೌಮ್ಯ ಕಣ್ಣೀರು ಹಾಕಿದ್ದಾರೆ.
ಪ್ರಭುದ್ಧ ಈ ಹಿಂದೆ ಎರಡು-ಮೂರು ಬಾರಿ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು. ಇದೀಗ ಮನೆಯಲ್ಲಿ ಯಾರು ಇಲ್ಲದ ವೇಳೆ ಚಾಕುವಿನಿಂದ ಕುತ್ತಿಗೆ ಹಾಗೂ ಕೈಯನ್ನ ಕೊಯ್ದುಕೊಂಡಿದ್ದಾಳೆ ಎನ್ನಲಾಗುತ್ತಿದೆ. ಆದರೂ ಪ್ರಕರಣ ಸಂಬಂಧ ಸುಬ್ರಹ್ಮಣ್ಯಪುರ ಪೊಲೀಸರಿಂದ ಅನುಮಾನಾಸ್ಪದ ಸಾವು ಕೇಸ್ ದಾಖಲಾಗಿದೆ. ಸದ್ಯ ಪೊಲೀಸರು ಮೃತ ಯುವತಿಯ ಮೊಬೈಲ್ ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.