
ಹುಬ್ಬಳ್ಳಿ: ಕಳೆದ ಎರಡು ದಿನದ ಹಿಂದೆ ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಅಂಬಿಗರ ಎಂಬ ಯುವತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಗಿರೀಶ ಅಲಿಯಾಸ್ ವಿಶ್ವನಾಥನ್ನು ಹುಬ್ಬಳ್ಳಿ ಧಾರವಾಡ ಪೊಲೀಸರು ಬಂಧಿಸಿದ್ದಾರೆ.
ಅಂಜಲಿ ಹಂತಕ ವಿಶ್ವನಾಥನನ್ನು ಬಂಧಿಸಿದ್ದಾಗಿ ಹುಬ್ಬಳ್ಳಿ – ಧಾರವಾಡ ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ. ಮೇ 15ರಂದು ಬೆಳಗಿನ ಜಾವ ಅಂಜಲಿ ಹತ್ಯೆ ಮಾಡಿದ್ದ ವಿಶ್ವನಾಥ ಸ್ಥಳದಿಂದ ಪರಾರಿಯಾಗಿದ್ದ. ಗುರುವಾರ ರಾತ್ರಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
ನಿನ್ನೆ ರಾತ್ರಿಯೇ ಹಂತಕ ಗಿರೀಶನನ್ನು ಹುಬ್ಬಳ್ಳಿ ಧಾರವಾಡ ಪೊಲೀಸರು ವಶಕ್ಕೆ ಪಡೆದಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಬೆಳಗ್ಗೆ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ಭೇಟಿ ನೀಡಿದ್ದಾರೆ.