
ಹುಬ್ಬಳ್ಳಿ : ಅಂಜಲಿ ಹತ್ಯೆ ಮಾಡಿದ ಆರೋಪಿಗೆ ಎನ್ ಕೌಂಟರ್ ಮಾಡುವಂತೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಶ್ರೀರಾಮ ಸೇನಾ ಕಾರ್ಯಕರ್ತರು ಪ್ರತಿಭಟನೆ ಮಾಡಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ಮಾಡಿದ ಅವರು ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಅಂಜಲಿ ಹತ್ಯೆ ಮಾಡಿರುವ ಆರೋಪಿಗೆ ಕೂಡಲೇ ಎನ್ ಕೌಂಟರ್ ಮಾಡಬೇಕು ಎಂದು ಒತ್ತಾಯ ಮಾಡಿದರು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.