ಹುಬ್ಬಳ್ಳಿ : ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಅಂಜಲಿ ಕೊಲೆಗೆ ಪೊಲೀಸ್ ನಿರ್ಲಕ್ಷ್ಯ ಕಾರಣ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ನೇತೃತ್ವದಲ್ಲಿ ವೀರಾಪೂರ ಓಣಿಯಿಂದ ಶಹರ ಪೊಲೀಸ್ ಠಾಣೆವರೆಗೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು.