August 18, 2025
IMG_20240517_133548

ಧಾರವಾಡ: ಅಂಜಲಿ ಅಂಬಿಗೇ‌ರ್ ಹತ್ಯೆ ಪ್ರಕರಣ ಖಂಡಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ನವನಗರದ ನಿವಾಸಿಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಹುಬ್ಬಳ್ಳಿಯಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಏನು ಮಾಡುತ್ತಿವೆ. ಅಂಜಲಿ ಹಾಗೂ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿಗಳನ್ನು ಎನ್ ಕೌಂಟರ್ ಮಾಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Leave a Reply

Your email address will not be published. Required fields are marked *