July 27, 2024

{"remix_data":[],"source_tags":[],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false}

ಬೆಳಗಾವಿ: ಗ್ಯಾಸ್ ಸಿಲೆಂಡರ್ ಸ್ಪೋಟಗೊಂಡು ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಂದು ಬೆಳಗಿನ ಜಾವ ಬೆಳಗಾವಿ ಯ ಸುಳ್ಗಾ ಗ್ರಾಮದಲ್ಲಿ ನಡೆದಿದೆ.

ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡವರ ಹೆಸರು ಕಲ್ಲಪ್ಪ ಪಾಟೀಲ್ (ವಯಸ್ಸು 62) ಮತ್ತು ಸುಮನ್ ಪಾಟೀಲ್ (60 ವರ್ಷ). ಗಾಯಾಳುಗಳನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಸ್ಫೋಟದ ಸದ್ದು ಕೇಳಿದ ಅಕ್ಕಪಕ್ಕದ ನಾಗರಿಕರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಸಿಲಿಂಡರ್ ಸ್ಫೋಟದ ನಂತರ ಗೃಹೋಪಯೋಗಿ ವಸ್ತುಗಳು ಸಂಪೂರ್ಣ ಪಲ್ಟಿಯಾಗಿ ಎಲ್ಲೆಂದರಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡು ಬಂದಿದೆ.
ಈ ಘಟನೆಯಿಂದ ಮನೆ ಹಾಗೂ ಮನೆಯಲ್ಲಿದ್ದ ಸಾಮಗ್ರಿಗಳಿಗೆ ಸಾಕಷ್ಟು ಹಾನಿಯಾಗಿದೆ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Leave a Reply

Your email address will not be published. Required fields are marked *