August 18, 2025
IMG_20240518_153117

ಅಣ್ಣಿಗೇರಿ: ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ ತುಂಬಿದ ಬೋಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ ಸಂಭವಿಸಿ ಇಬ್ಬರಿಗೆ ಗಾಯಗಳಾಗಿರುವ ಘಟನೆ ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿದ್ದ ಲಿಂಗಸೂರು ತಾಲೂಕಿನ ಆಸಳಾ ತಾಂಡಾದ ಚಂದವ್ವ ನಾಯ್ಕ (48) ಮತ್ತು ಪ್ರೀತಿ ರಾಠೋಡ(27) ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಎರಡೂ ವಾಹನಗಳು ಸಹ ನಜ್ಜುಗುಜ್ಜಾಗಿವೆ.

ಇನ್ನು ಘಟನಾ ಸ್ಥಳಕ್ಕೆ ಅಣ್ಣಿಗೇರಿ ಪೊಲೀಸ್ ಠಾಣೆಯ ಪಿಎಸ್‌ಐ ಸಿದ್ದಾರೂಢ ಆಲದಕಟ್ಟಿ ಮತ್ತು ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *