October 12, 2024

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ಕೊಲೆಗೀಡಾದ ಅಂಜಲಿ ಅಂಬಿಗೇರಾ ಅವರ ಸಹೋದರಿ ಯಶೋದಾ ಆತ್ಮಹತ್ಯೆ ಮಾಡಲು ಪ್ರಯತ್ನಿಸಿದ ಕಳವಳಕಾರಿ ಘಟನೆ ವರದಿಯಾಗಿದೆ. ಅವರನ್ನು ಕೂಡಲೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿ ಹೇಳಿದೆ.

ಅಕ್ಕನ ಮರಣದಿಂದ ಮನನೊಂದಿರುವ ಯಶೋದಾ ಶನಿವಾರ (ಮೇ 18) ಸ್ವಾಮೀಜಿಗಳ ಪ್ರತಿಭಟನೆಯಲ್ಲಿ ಭಾಗವಹಿಸಿ ಮನೆಗೆ ಹೋದ ಬಳಿಕ ಈ ಅತಿರೇಕದ ಕೆಲಸ ಮಾಡಿದ್ದಾರೆ. ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ನಿನ್ನೆ ಅಂಬಿಗರ ಚೌಡಯ್ಯ ಪೀಠದ ಶ್ರೀ ಶಾಂತಭೀಷ್ಮ ಸ್ವಾಮೀಜಿ, ದಿಂಗಾಲೇಶ್ವರ ಶ್ರೀ, ಮನಸೂರಿನ ಬಸವರಾಜ ದೇವರು ಶ್ರೀ ಸೇರಿದಂತೆ ವಿವಿಧ ಮಠಾಧೀಶರು ಮತ್ತು ಸಾರ್ವಜನಿಕರು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯಲ್ಲಿ ಯಶೋಧ ಕೂಡ ಭಾಗಿಯಾಗಿದ್ದಳು. ಪ್ರತಿಭಟನೆ ವೇಳೆ ಯಶೋಧ ಪ್ರಜ್ಞೆ ತಪ್ಪಿ ಬಿದ್ದಿದ್ದರು.ಕೂಡಲೆ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿತ್ತು. ಮನೆಗೆ ಹೋದ ಯಶೋಧ ರಾತ್ರಿ ಪಿನಾಯಲ್​ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ.

Leave a Reply

Your email address will not be published. Required fields are marked *