July 1, 2025
n60965311417160943904477192e529a033ef66deab64503af24d2de435a9200889bcf87d9edc8cd54b22bc

ಮೈಸೂರು: ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ್ಯಾಕ್ಟರ್‌ಗೆ ಸಿಲುಕಿ ದಾರುಣವಾಗಿ ಮೃತಪಟ್ಟಿದ್ದಾನೆ. ಮೈಸೂರಿನ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಿನ್ನೆ ಶುಕ್ರವಾರ ಮಧ್ಯಾಹ್ನ ಘಟನೆ ನಡೆದಿದೆ. ಭವಿಷ್ (8) ಮೃತ ದುರ್ದೈವಿ.
ಭವಿಷ್‌ ತನ್ನ ತಾಯಿ ಮಮತಾ ಜತೆಗೆ ಚಾಮರಾಜನಗರದಿಂದ ದೇವರಸನಹಳ್ಳಿಗೆ ಬಂದಿದ್ದ. ಈ ವೇಳೆ ಭವಿಷ್‌ ಸೋದರ ಮಾವನ ಜತೆ ಟ್ರ್ಯಾಕ್ಟರ್‌ನಲ್ಲಿ ಜಮೀನಿಗೆ ಹೋಗಿದ್ದ. ಟ್ರ್ಯಾಕ್ಟರ್‌ನಲ್ಲಿ ಉಳುಮೆ ಮಾಡುವಾಗ ಆಕಸ್ಮಿಕವಾಗಿ ಟ್ರ್ಯಾಕ್ಟರ್‌ನಿಂದ ಕೆಳಗೆ ಬಿದ್ದಿದ್ದಾನೆ. ಆಗ ಕ್ಷಣ ಮಾತ್ರದಲ್ಲಿ ಟ್ರ್ಯಾಕ್ಟರ್ ರೋಟವೇಟರ್‌ಗೆ ಸಿಲುಕಿದ ಭವಿಷ್‌ ದೇಹ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಮೃತಪಟ್ಟಿದ್ದ.

ಬಾಲಕನ ಸಾವಿನ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬಾಲಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *