July 27, 2024

ಶಿವಮೊಗ್ಗ :ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ ಜಿಲ್ಲೆಯ ಕಲಘಟಗಿ ಮೂಲದ ಮಹಿಳೆ (37) ಎನ್ನಲಾಗಿದೆ.

ಸಿಗಂದೂರು ಚೌಡೇಶ್ವರಿ ದರ್ಶನ ಪಡೆದು ಬರುವಾಗ ಆತುರದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹತ್ತುವಾಗ ಆಯಾತಪ್ಪಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಬಸ್‌ ಮುಂದೆ ಚಲಿಸಿದ್ದು, ಚಕ್ರದಡಿ ಸಿಲುಕಿ ಮೃತಪಟ್ಟಿದ್ದಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Leave a Reply

Your email address will not be published. Required fields are marked *