
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ರಜಾಕ್ ಎಂಬಾತ ಜೈಲುಪಾಲಾದ ಶಿಕ್ಷಕ. ಉಚಿತ ಪಡಿತರ ಯೋಜನೆಯಡಿ ಮಾನವ ಬಳಕೆಗೆ ಯೋಗ್ಯವಲ್ಲದ ಆಹಾರ ಧಾನ್ಯಗಳನ್ನು ವಿತರಿಸುವುದರಿಂದ ಯಾರೂ ಮೋದಿಗೆ ಮತ ಹಾಕಬೇಡಿ ಎಂದು ಮಕ್ಕಳಿಗೆ ಶಿಕ್ಷಕ ಹೇಳುತ್ತಿದ್ದರು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಮಕ್ಕಳ ಕುಟುಂಬ ಸದಸ್ಯರು ಲಿಖಿತ ದೂರು ಸಲ್ಲಿಸಿದ್ದಾರೆ.
ಜಿಲ್ಲಾ ಶಿಕ್ಷಣಾಧಿಕಾರಿ ಎಫ್‌ಐಆರ್ ದಾಖಲಿಸಿದ ನಂತರ, ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮುಜಾಫರ್‌ಪುರ ಎಸ್‌ಎಸ್‌ಪಿ ರಾಕೇಶ್ ಕುಮಾರ್ ಹೇಳಿದ್ದಾರೆ.
ಹಲವಾರು ಹುಡುಗರು ಮತ್ತು ಹುಡುಗಿಯರು ತರಗತಿಯೊಳಗೆ ರಜಾಕ್ ಇಂತಹ ಮಾತುಗಳನ್ನು ಹೇಳುತ್ತಿದ್ದಾರೆಂದು ದೃಢಪಡಿಸಿದರು. ಪ್ರಾಥಮಿಕವಾಗಿ ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ಯಾವುದೇ ಸರ್ಕಾರಿ ನೌಕರರು ಮಾತನಾಡುವ ಮೂಲಕ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುವುದನ್ನು ನಿಷೇಧಿಸಲಾಗಿದೆ. ಅಗತ್ಯ ಕ್ರಮಕ್ಕಾಗಿ ಶಿಕ್ಷಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.