ಧಾರವಾಡ : ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ನೇತೃತ್ವದಲ್ಲಿ ಮಾದಿಗ ಸಮುದಾಯ ಮತ್ತು ದಲಿತ ಸಂಘಟನೆ ವತಿಯಿಂದ ರಾಜ್ಯ ಸರ್ಕಾರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಎಂ.ರಾಜೀವ್ ಅವರನ್ನು ಅಮಾನತು ಖಂಡಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿಯಲ್ಲೇ ಹೆಚ್ಚಾಗಿ ಕೊಲೆ, ಸುಲಿಗೆ, ದರೋಡೆಯಂತಹ ಪ್ರಕರಣಗಳು ನಡೆಯುತ್ತಿವೆ. ಇಲ್ಲಿ ಆರೋಪಿಗಳಿಗೆ ಭಯವೇ ಇಲ್ಲದಂತಾಗಿದೆ. ಪೊಲೀಸ್ ಇಲಾಖೆಯನ್ನು ನಿಭಾಯಿಸುವಲ್ಲಿ ಗೃಹ ಮಂತ್ರಿಗಳು ಸಂಪೂರ್ಣ ವಿಫಲರಾಗಿದ್ದಾರೆ. ಇಚ್ಛಾಶಕ್ತಿ ಇದ್ದರೆ ಗೃಹ ಮಂತ್ರಿಗಳು ಆ ಖಾತೆ ನಿಭಾಯಿಸಬೇಕು, ಇಲ್ಲದೇ ಹೋದರೆ ಬೇರೆಯವರಿಗೆ ಆ ಖಾತೆ ಕೊಡಬೇಕು. ಅದನ್ನೆಲ್ಲ ಬಿಟ್ಟು ದಕ್ಷತೆಯಿಂದ ಕೆಲಸ ಮಾಡುತ್ತಿದ್ದ ಎಂ.ರಾಜೀವ್ ಅವರನ್ನು ಅಮಾನತು ಮಾಡುವ ಮೂಲಕ ಗುಬ್ಬಿ ಮೇಲೆ ಬ್ರಹ್ಮಾಸ್ತ್ ಪ್ರಯೋಗಿಸಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.