ಹುಬ್ಬಳ್ಳಿ: ಅವಳಿನಗರದಲ್ಲಿ ದಿನೇ ದಿನೇ ಅಪರಾಧಗಳು ಹೆಚ್ಚುತ್ತಿವೆ. ಪುಡಿ ರೌಡಿಗಳು ಬಾಲ ಬಿಚ್ಚಿದ್ದಾರೆ. ಹುಬ್ಬಳ್ಳಿ- ಧಾರವಾಡ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ನೂತನ ಉಪ ಪೊಲೀಸ್ ಆಯುಕ್ತರನ್ನಾಗಿ ಕುಶಾಲ್ ಚೌಕ್ಷೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಕುಶಾಲ್ ಚೌಕ್ಷೆ ಅವರು ವಿಧಿವಿಜ್ಞಾನ ಪ್ರಯೋಗಾಲಯದ ಜಂಟಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರನ್ನು ಈಗ ಹುಬ್ಬಳ್ಳಿ-ಧಾರವಾಡ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಡಿಸಿಪಿಯಾಗಿ ನೇಮಕ ಮಾಡಲಾಗಿದೆ.