October 13, 2025
n6104344301716283556908be6699d9bf0f88820698443a8614210024008ee04250a3f8ac06eb03c782f7f7

ರಾಯಚೂರು: ಬೀದಿ ನಾಯಿ ದಾಳಿಯಿಂದ ಗಾಯಗೊಂಡಿದ್ದ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ರಾಯಚೂರು ತಾಲೂಕಿನ ಕೊರವಿಹಾಳ ಗ್ರಾಮದಲ್ಲಿ ನಡೆದಿದೆ.
15 ದಿನಗಳ ಹಿಂದೆ ಗ್ರಾಮದಲ್ಲಿ ಬೀದಿ ನಾಯಿ ದಾಳಿ ಮಾಡಿದ್ದು, ಒಂದೇ ದಿನ 7 ಮಕ್ಕಳ ಕಚ್ಚಿ ಗಾಯಗೊಳಿಸಿತ್ತು. ಮನೆಯ ಬಳಿ ಆಟವಾಡುತ್ತಿದ್ದ ಮಕ್ಕಳ ಮೇಲೆ ದಾಳಿ ನಡೆಸಿದ್ದ ವೇಳೆ ಕೀರಲಿಂಗ ಅವರ ನಾಲ್ಕು ವರ್ಷದ ಪುತ್ರಿ ಲಾವಣ್ಯ ನಾಯಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದಳು. ಕುತ್ತಿಗೆಯ ಹಿಂಭಾಗಕ್ಕೆ ನಾಯಿ ಕಚ್ಚಿದ್ದರಿಂದ ತೀವ್ರ ರಕ್ತಸ್ರಾವಕ್ಕೊಳಗಾದ ಲಾವಣ್ಯರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಮೃತಪಟ್ಟಿದ್ದಾಳೆ. ನಾಯಿ ಕಡಿತಕ್ಕೆ ಒಳಗಾದ ಉಳಿದ ಮಕ್ಕಳ ಪೋಷಕರಲ್ಲಿ ಆತಂಕ ಉಂಟಾಗಿದೆ. ಘಟನೆ ನಂತರ ಗ್ರಾಮಸ್ಥರು ಬೀದಿ ನಾಯಿಯನ್ನು ಹೊಡೆದು ಕೊಂದು ಹಾಕಿದ್ದಾರೆ.

Leave a Reply

Your email address will not be published. Required fields are marked *