September 19, 2024

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆಯ ಆರೋಪಿಯನ್ನು ಸಿಐಡಿ ಅಧಿಕಾರಿಗಳು ವಶಕ್ಕೇ ಪಡೆದು ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಈ ನಡುವೆ ಆರೋಪಿ ವಿಶ್ವ ನ ತಾಯಿಯನ್ನು ಕೂಡಾ ಸಿಐಡಿ ಅಧಿಕಾರಿಗಳು ಸತತ 2 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆಗೆ ವಿಶ್ವನ ತಾಯಿ ಶ್ವೇತಾಳನ್ನು ಬೆಂಡಿಗೇರಿ ಠಾಣೆಗೆ ಕರೆತಂದು ಸಾಯಂಕಾಲ 5 ಗಂಟೆಯ ವರೆಗೂ ಕೂಡಾ ವಿಚಾರಣೆ ನಡೆಸಿ ಕಳುಹಿಸಿ ಕೊಟ್ಟಿದ್ದಾರೆ. ಆದ್ರೆ ವಿಚಾರಣೆ ವೇಳೆಯಲ್ಲಿ ಆಟೋದಲ್ಲಿ ತೆರಳುತ್ತಿದ್ದ ಶ್ವೇತಾ ಮಾತ್ರ ಮಾಧ್ಯಮಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಕೊಡದೆ ತೆರಳಿದ್ದಾರೆ.

Leave a Reply

Your email address will not be published. Required fields are marked *