January 13, 2026
IMG-20240523-WA0007

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಈ ಹಿನ್ನೆಲೆಯಲ್ಲಿ ಹು -ಧಾ ಕಮಿಷನರ್ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣದಿಂದ ಪ್ರತಿಭಟನೆ ನಡೆಸಲಾಯಿತು.

ಹುಬ್ಬಳ್ಳಿಯಲ್ಲಿ ಕಳೆದ ಕೆಲ ತಿಂಗಳುಗಳಿಂದ ಅಪರಾಧ ಪ್ರಕರಣಗಳು ಮಿತಿ ಮೀರುತ್ತಿದ್ದು, ಪೊಲೀಸ್ ಕಮಿಷನರ್ ಅಪರಾಧ ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಹಾಗೂ ಕಮಿಷನರ್ ವರ್ಗಾವಣೆಗೆ ಆಗ್ರಹಿಸಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.‌

ಅಲ್ಲದೇ ನೇಹಾ ಹಿರೇಮಠ ಹಾಗೂ ಅಂಜಲಿ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು ಹಾಗೂ ನಗರದಲ್ಲಿ ಗಾಂಜಾ ಮಾರಾಟಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

Leave a Reply

Your email address will not be published. Required fields are marked *