October 16, 2025
n6114369321716601400669ab4f25d1482b9c8b23d23aed59822e8f1e0a13e0125b84c596adc14bba2c99e3

ಚಿಕ್ಕಮಗಳೂರು: ಲಾರಿಗೆ ಓಮ್ನಿ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ದಾರುಣ ಸಾವನ್ನಪ್ಪಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ನಡೆದಿದೆ.

ಘಟನೆಯಲ್ಲಿ ಮೂವರಿಗೆ ಗಂಭೀರಗಾಯವಾಗಿದೆ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಮೃತ ನಾಲ್ವರು ಚಿತ್ರದುರ್ದವರು ಎಂದು ಹೇಳಲಾಗುತ್ತಿದೆ.
ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಾಪಸ್​​ ಬರುವಾಗ, ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಓಮ್ನಿ ಕಾರು ಡಿಕ್ಕೆಯಾಗಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟದ್ದಾರೆ. ಘಟನೆ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Leave a Reply

Your email address will not be published. Required fields are marked *