ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ಫೋಟೊ ಹಾಗೂ ವಿಡಿಯೊಗಳನ್ನು ಬಹಿರಂಗಗೊಳಿಸಿದ ಪೆನ್ ಡ್ರೈವ್ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ನಾಲ್ವರು ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಪ್ರಾಸಿಕ್ಯೂಷನ್‌ಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ ಆರೋಪಿಗಳಾದ ನವೀನ್ ಗೌಡ ಅಲಿಯಾಸ್ ಎನ್.ಆರ್. ನವೀನ್ ಕುಮಾರ್, ಎನ್. ಕಾರ್ತಿಕ್, ಬಿ.ಸಿ. ಚೇತನ್ ಕುಮಾರ್ ಹಾಗೂ ಎಚ್.ವಿ. ಪುಟ್ಟರಾಜು ಸಲ್ಲಿಸಿರುವ ಅರ್ಜಿಗಳನ್ನು ರಜಾಕಾಲದ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಸ್.ರಾಚಯ್ಯ ವಿಚಾರಣೆ ನಡೆಸಿದರು.
ಪ್ರತಿವಾದಿ ರಾಜ್ಯ ಪ್ರಾಸಿಕ್ಯೂಷನ್‌ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ, ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿ ವಿಚಾರಣೆ ಮುಂದೂಡಿದರು.