August 19, 2025
n61188343817167116742545de29aaf6e1773ef39a74f10b07cda75213f27a2bb39a12cf2b95aaf3f09d07e

ಹಾಸನ: ಟೊಯೋಟಾ ಇಟಿಯೋಸ್ ಕಾರು ಕಂಟೇನರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾದ ದಾರುಣ ಘಟನೆ ನಡೆದಿದೆ.

ಹಾಸನ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಕಂದಲಿ ಸಮೀಪದ ಇಂದು ಬೆಳಗಿನ ಜಾವ 6:30 ರಲ್ಲಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಹಿಳೆಯರು, ಮೂರು ಪುರುಷರು, ಒಂದು ಮಗು ಸೇರಿ 6 ಮಂದಿ ಮೃತರಾಗಿದ್ದಾರೆ.
ಒಂದೇ ಕುಟುಂಬದ ನಾರಾಯಣ ಸ್ವಾಮಿ, ಸುನಂದಾ, ರವಿಕುಮಾರ್, ನೇತ್ರ,
ಚೇತನ್ (ಬಾಲಕ), ರಾಕೇಶ್ (ಡ್ರೈವರ್) ಮೃತರು.
ಎಲ್ಲರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ, ಅಂದರಹಳ್ಳಿ ಹಾಗೂ ದೇವನಹಳ್ಳಿ ಬಳಿಯ ಕಾರಹಳ್ಳಿ ಮೂಲದವರು.
ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು KA-53-C.1419 ನಂಬರ್‌ನ ಇಟಿಯೋಸ್ ಕಾರಿನಲ್ಲಿ ತೆರಳಿದ್ದ ಕುಟುಂಬ ಸದಸ್ಯರು ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.
ಬೆಳಗಿನ ಜಾವ ನಿದ್ದೆ ಮಂಪರಿನಲ್ಲಿ ವಾಹನ ಡಿವೈಡರ್ ಗೆ ಡಿಕ್ಕಿ ಹೊಡೆದು ಪಕ್ಕದ ಲೇನ್ ಗೆ ಹಾರಿ ಕಂಟೇನರ್‌ಗೆ ಗುದ್ದಿದೆ. ಘಟನೆ ವಿವರ ಇನ್ನಷ್ಟೇ ತಿಳಿಯಬೇಕಿದೆ.
ಅಪಘಾತದಲ್ಲಿ ಕಾರು ನುಜ್ಜುಗುಜ್ಜಾಗಿದ್ದು ಒಳಗೆ ಸಿಲುಕಿರುವ ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸಪಡುತ್ತಿದ್ದಾರೆ.

Leave a Reply

Your email address will not be published. Required fields are marked *