October 13, 2025
1309115-ration-cards

ಬೆಂಗಳೂರು: ಹೊಸ ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಆಹಾರ ಇಲಾಖೆ ಶಾಕ್‌ ನೀಡಿದ್ದು, ಲೋಕಸಭೆ ಚುನಾವಣೆ ನೀತಿ ಸಂಹಿತೆ ತೆರವುಗೊಂಡ ಬಳಿಕವೂ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡದೇ ಇರಲು ನಿರ್ಧರಿಸಿದೆ ಎನ್ನಲಾಗಿದೆ.
ಹೊಸದಾಗಿ ರೇಷನ್ ಕಾರ್ಡ್​ಗಳನ್ನು ನಿಗದಿಗಿಂತ ಹೆಚ್ಚುವರಿ ಮಂಜೂರು ಮಾಡಬಾರದು. 3 ತಿಂಗಳಿಂದ ರೇಷನ್ ಪಡೆಯದ ಕಾರ್ಡ್​ಗಳನ್ನು ರದ್ದು ಮಾಡಬೇಕು. ಬಾಕಿ ಉಳಿದಿರುವ ಅರ್ಜಿಗಳನ್ನು ಏಕಕಾಲದಲ್ಲಿ ವಿಲೇವಾರಿ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ನಿರ್ಬಂಧ ಹೇರಿದೆ.

ಮಾನದಂಡವನ್ನು ಪಾಲಿಸಿಯೇ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದು ಸರ್ಕಾರ ಅಧಿಕಾರಿಗಳಿಗೆ ತಿಳಿಸಿದ್ದು, ನಿಯಮ ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ಕೊಟ್ಟಿದೆ. ಹೀಗಾಗಿ, ಹೊಸ ರೇಷನ್ ಕಾರ್ಡ್​ಗಾಗಿ ಅರ್ಜಿ ಸಲ್ಲಿಸಿ ಮೂರು ವರ್ಷದಿಂದ ಕಾಯುತ್ತಿರುವವರಿಗೆ ಹಾಗೂ ಹೊಸದಾಗಿ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸುತ್ತಿರುವವರಿಗೆ ಬಿಗ್‌ ಶಾಕ್‌ ಎದುರಾಗಿದೆ.

Leave a Reply

Your email address will not be published. Required fields are marked *