October 13, 2025
Kalyan-Yalamanchili-in-US-met-with-road-accident

ಬೆಂಗಳೂರು: ರಾಜ್ಯದಲ್ಲಿ ಕೇವಲ 24 ಗಂಟೆ ಅವಧಿಯಲ್ಲಿ ಅಪಘಾತದಲ್ಲಿ 51 ಜನ ಸಾವನ್ನಪ್ಪಿದ್ದಾರೆ. ಹಾಸನ ಸೇರಿದಂತೆ ರಾಜ್ಯದ ವಿವಿಧ ಕಡೆ ನಡೆದ ಅಪಘಾತಗಳಲ್ಲಿ 51 ಜನ ಬಲಿಯಾಗಿದ್ದು, ಇತ್ತೀಚಿನ ದಿನಗಳಲ್ಲಿ ಒಂದೇ ದಿನ ರಸ್ತೆಯ ಅಪಘಾತಗಳಲ್ಲಿ ಸಂಭವಿಸಿದ ಅತಿ ಹೆಚ್ಚಿನ ಸಾವಿನ ಪ್ರಮಾಣ ಇದಾಗಿದೆ.
ರಾಜ್ಯ ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ಸಂಚಾರ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ.
ಅಪಘಾತಗಳಲ್ಲಿ ಸಾವಿನ ಪ್ರಮಾಣ ಹೆಚ್ಚಳದ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಹಾಸನ ಸೇರಿ ರಾಜ್ಯದಲ್ಲಿ 24 ಗಂಟೆಯಲ್ಲಿ 51 ಮಂದಿ ಮೃತಪಟ್ಟಿದ್ದಾರೆ. ಅತಿ ವೇಗ, ಅಜಾಗರೂಕತೆಯ ಚಾಲನೆಯೇ ಅಪಘಾತಗಳಿಗೆ ಪ್ರಮುಖ ಕಾರಣವಾಗಿದೆ. ಜನರು ಸಂಚಾರ ನಿಯಮ ಪಾಲಿಸಿದರೆ ಜೀವ ರಕ್ಷಣೆ ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *