ಹುಬ್ಬಳ್ಳಿ :ಅಂಜಲಿ ಹತ್ಯೆ ಬಳಿಕ ಅಲರ್ಟ್ ಆದ ಖಾಕಿ ಪಡೆಯು ಇದೀಗ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಸುಮಾರು ಹತ್ತಕ್ಕೂ ಹೆಚ್ಚು ರೌಡಿ ಶೀಟರ್ ಮನೆ ಮೇಲೆ ಏಕಾಏಕಿ ದಾಳಿ ನಡೆಸಿದ್ದು , ಬೆಳ್ಳಂಬೆಳಗ್ಗೆ ಪೊಲೀಸರು ರೌಡಿ ಶೀಟರ್ ಮನೆಗೆ ಹೋಗಿ ತಪಾಸಣೆ ಮಾಡಿದ್ದಾರೆ.
ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಾರುತಿ ಗುಳ್ಳಾರಿ ನೇತೃತ್ವದಲ್ಲಿ ರೌಡಿ ಶೀಟರ್ ಮನೆ ಮೇಲೆ ದಾಳಿ ಮಾಡಲಾಗಿದೆ. ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಂಜಲಿ ಮರ್ಡರ್ ಆಗಿತ್ತು. ಹೀಗಾಗಿ ಅಲರ್ಟ್ ಆದ ಬೆಂಡಿಗೇರಿ ಪೊಲೀಸರು ದಾಳಿಗೆ ಲಗ್ಗೆ ಇಟ್ಟಿದ್ದಾರೆ.