ಬೆಳಗಾವಿ:- ಪೊಲೀಸ್ ಠಾಣೆಯಲ್ಲೇ ಎಣ್ಣೆ ಪಾರ್ಟಿ ಮಾಡಿದ್ದ ಹೆಡ್ ಕಾನ್ಸ್‌ಟೇಬಲ್ ನನ್ನು ಅಮಾನತು ಮಾಡಲಾಗಿದೆ. ಚಿಕ್ಕೋಡಿ ತಾಲೂಕಿನ ಅಂಕಲಿ ಪೊಲೀಸ್ ಠಾಣೆಯಲ್ಲಿ ಜರುಗಿದೆ.
ಮದ್ಯದ ಖಾಲಿ ಬಾಟಲ್, ವಾಟರ್ ಬಾಟಲ್ ಟೇಬಲ್ ಮೇಲೆ ಇರುವ ಫೋಟೋಗಳು ವೈರಲ್ ಆಗಿತ್ತು. ಪೊಲೀಸರ ನಡೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿತ್ತು. ಈ ಹಿನ್ನಲೆ ಅಂಕಲಿ ಠಾಣೆ ಹೆಡ್ ಕಾನ್ಸ್‌ಟೇಬಲ್ ರಾಮಚಂದ್ರ ಖೋತ ಎಂಬುವವರನ್ನು ಅಮಾನತುಗೊಳಿಸಿ ಎಸ್ಪಿ ಭೀಮಾಶಂಕರ ಗುಳೇದ್ ಅವರು ಆದೇಶ ಹೊರಡಿಸಿದ್ದಾರೆ.