ಹುಬ್ಬಳ್ಳಿ: ಕಳೆದ ಕೆಲ ತಿಂಗಳುಗಳಿಂದ ಹುಬ್ಬಳ್ಳಿ ನಗರದಲ್ಲಿ ಸಾಲು ಸಾಲು ಹತ್ಯೆಗಳಿಂದ ಈಗಾಗಲೇ ಜಿಲ್ಲೆ ನಲುಗಿ ಹೋಗಿದೆ. ಈ ಬೆನ್ನಲ್ಲೇ ಹತ್ಯೆಗಳಿಗೆ ಕಡಿವಣ ಹಾಕಲು ಇದೀಗ ಎಚ್ಚೆತ್ತ ಪೊಲೀಸರು ಬೆಳ್ಳಂಬೆಳಗ್ಗೆ ರೌಡಿಶೀಟರ್ ಗಳ ಮನೆ ಮೇಲೆ ದಾಳಿ ನಡೆಸುತ್ತಿದ್ದಾರೆ.
ಇಂದು ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಮಿಯುಲ್ಲಾ.ಕೆ ನೇತೃತ್ವದಲ್ಲಿ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಮನೆಗಳ ಮೇಲೆ ದಾಳಿ ನಡೆಸಿದ ಪೊಲೀಸರು ನಲವತ್ತಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆ ಮೇಲೆ ದಾಳಿ ಮಾಡಿ ತಪಾಸಣೆ ನಡೆಸಿದ್ದಾರೆ.