ಹುಬ್ಬಳ್ಳಿ: ರಾಜ್ಯದಲ್ಲಿ ಲವ್ ಜಿಹಾದ್‌ಗೆ ಸಿಲುಕಿದ ಹಿಂದೂ ಯುವತಿಯರು ಹಾಗೂ ಮಹಿಳೆಯರ ರಕ್ಷಣೆಗಾಗಿ ಶ್ರೀರಾಮ ಸೇನೆ ಸಂಸ್ಥಾಪಕ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ರಾಜ್ಯಾದ್ಯಂತ ಅನ್ವಯವಾಗುವಂತೆ ಶ್ರೀರಾಮ ಸೇನೆಯ ಸಹಾಯವಾಣಿ (Sri Rama Sena helpline ) ಸಂಖ್ಯೆಗೆ 90904 43444 ಚಾಲನೆ ನೀಡಿದರು.
ಹುಬ್ಬಳ್ಳಿ ಜಿಲ್ಲಾ ಕೇಂದ್ರಗಳಲ್ಲಿ ಶ್ರೀರಾಮ ಸೇನೆಯ ಜಿಲ್ಲಾ ಘಟಕದ ವತಿಯಿಂದ ಹಿಂದೂ ಹೆಣ್ಣುಮಕ್ಕಳ ರಕ್ಷಣೆಗಾಗಿ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಈ ಸಹಾಯವಾಣಿಯು ದಿನದ 24×7 ಕಾರ್ಯ ನಿರ್ವಹಿಸಲಿದೆ. ಲವ್ ಜಿಹಾದ್ ನಲ್ಲಿ ಸಿಲುಕಿರುವ ಹಿಂದೂ ಹೆಣ್ಣು ಮಕ್ಕಳ ರಕ್ಷಣೆಗಾಗಿ ಸಹಾಯವಾಣಿ ಆರಂಭಿಸಲಾಗಿದ್ದು, ಈ ಮೂಲಕ ಹಿಂದೂ ಧರ್ಮದ ಹಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಲು ನೆರವಾಗಲಿದೆ. ಹುಬ್ಬಳ್ಳಿಯಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಸಹಾಯವಾಣಿಗೆ ಚಾಲನೆ ನೀಡಿದರು.
ಇನ್ನು ಶ್ರೀರಾಮ ಸೇನೆಯಿಂದ ಬಿಡುಗಡೆ ಮಾಡಲಾದ ಸಹಾಯವಾಣಿಗೆ ಚಾಲನೆ ಕಾರ್ಯಕ್ರಮದಲ್ಲಿ ಹುಬ್ಬಳ್ಳಿಯಲ್ಲಿ ಅನ್ಯಕೋಮಿನ ಯುವಕ ಫಯಾಜ್‌ನ ಲವ್ ಜಿಹಾದ್‌ಗೆ ಬಲಿಯಾದಳೆಂದು ಹೇಳಲಾಗುತ್ತಿರುವ ನೇಹಾ ಹಿರೇಮಠ ಕುಟುಂಬಸ್ಥರು ಭಾಗವಹಿಸಿದ್ದರು. ಇನ್ನು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳ ಶ್ರೀರಾಮಸೇನೆ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.