ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ದಿನೇದಿನೇ ಅಪರಾಧ ಕೃತ್ಯಗಳು ಹೆಚ್ಚಾಗುತ್ತಲೇ ಇವೆ. ಅಷ್ಟೇ ಅಲ್ಲದೇ ಅಕ್ರಮ ಚಟುವಟಿಕೆಗಳ ಸಂಖ್ಯೆಯೂ ಸಹ ಹೆಚ್ಚಾಗಿದ್ದು, ಈ ನಿಟ್ಟಿನಲ್ಲಿ ಹು-ಧಾ ಪೊಲೀಸ್ ಕಮೀಷನರೇಟ್ ನಿಂದ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಯಿತು.
ಈ ಹಿನ್ನೆಲೆಯಲ್ಲಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯ ಬಾಂತಿಕಟ್ಟಿ ಸರ್ಕಲ್, ಬೀರಬಂದ್ ಸರ್ಕಲ್ ಸೇರಿದಂತೆ ವಿವಿಧೆಡೆ ಇನ್ಸೆಕ್ಟರ್ ಸುರೇಶ್ ಯಳ್ಳೂರ ನೇತೃತ್ವದ ತಂಡದಿಂಸ ಜಾಗೃತಿ ಮಂಡಿಸಲಾಯಿತು. ಸಾರ್ವಜನಿಕರನ್ನು ಒಂದಡೆ ಸೇರಿಸಿ ಅಪರಾಧ ಕೃತ್ಯಗಳು, ಮಹಿಳೆಯರ ಮೇಲಿನ ದೌರ್ಜನ್ಯ, ಗಾಂಜಾ, ಡ್ರಗ್ಸ್ ಸೇರಿದಂತೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.