July 11, 2025
n6129684941717058251341949724dc158de197c49e868594938c31f3bcbb99f9c7064d78c8b6b490cb9812

ತುಮಕೂರು: ಮಾಜಿ ಸಚಿವ ಸೊಗಡು ಶಿವಣ್ಣ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ನಿವಾಸಕ್ಕೆ ತೆರಳುವಾಗ ವಶಕ್ಕೆ ಪಡೆಯಲಾಗಿದೆ. ಹೇಮಾವತಿ ಎಕ್ಸ್ ಪ್ರೆಸ್ ಲಿಂಕಿಂಗ್ ಕೆನಾಲ್ ವಿಚಾರಕ್ಕಾಗಿ ತುಮಕೂರಿನಲ್ಲಿ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆಗೆ ಕರೆ ನೀಡಲಾಗಿತ್ತು.

ಪ್ರತಿಭಟನೆಯ ಸಿದ್ಧತೆ ಪರಿಶೀಲಿಸಲು ತೆರಳಿದ್ದ ಮಾಜಿ ಸಚಿವ ಸೊಗಡು ಶಿವಣ್ಣ, ಬೆಳಗುಂಬ ಪ್ರಕಾಶ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ತುಮಕೂರು ಕಡೆಗೆ ಕರೆದುಕೊಂಡು ಹೋಗಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *