ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು 35 ದಿನಗಳ ಬಳಿಕ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳು ಬಂಧಿಸಿದರು.
ಭಾರತೀಯ ಕಾಲಮಾನ ಪ್ರಕಾರ ಇಂದು ಸಂಜೆ 4.09 ಕ್ಕೆ ಜರ್ಮನಿಯ ಮ್ಯೂನಿಕ್‌ಮಿಂದ ಹೊರಟಿದ್ದ ವಿಮಾನದಲ್ಲಿ ಪ್ರಜ್ವಲ್ ರೇವಣ್ಣ ಹತ್ತಿರೋದು ಖಚಿತವಾಗಿತ್ತು. ಲುಫ್ತಾನ್ಸ್ ಏರ್‌ಲೈನ್ಸ್‌ನ LH764 ವಿಮಾನದ ಬ್ಯುಸಿನೆಸ್ ಕ್ಲಾಸ್‌ನಲ್ಲಿ ಪ್ರಜ್ವಲ್ ಪ್ರಯಾಣಿಸಿದ್ದು ಮಧ್ಯರಾತ್ರಿ 12.51ರ ಸುಮಾರಿಗೆ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ಕೆಐಎಬಿಗೆ ಬರುತ್ತಿದ್ದಂತೆ ಪ್ರಜ್ವಲ್ ರನ್ನು ಇಮಿಗ್ರೇಷನ್ ಅಧಿಕಾರಿಗಳ ಬಳಿ ಕರೆತಂದ CISF ಸಿಬ್ಬಂದಿ ಕೇಂದ್ರೀಯ ಕೈಗಾರಿಕೆ ಭದ್ರತಾ ಪಡೆ ಮತ್ತು ಸಿಐಎಸ್ಎಫ್ ಯೋಧರು. ಬಳಿಕ ಇಮಿಗ್ರೇಷನ್ ಅಧಿಕಾರಿಗಳಿಂದ ರಾಜತಾಂತ್ರಿಕ ಪಾಸ್‌ಪೋರ್ಟ್ ಸೇರಿ ಕೆಲ ದಾಖಲಾತಿಗಳ ಪರಿಶೀಲನೆ ನಡೆಸಿ ಎಸ್‌ಐಟಿ ಅಧಿಕಾರಿಗಳಿಗೆ ಒಪ್ಪಿಸಿದರು.
ಪ್ರಜ್ವಲ್ ರನ್ನು ಕರೆತರುವ ಹಿನ್ನಲೆಯಲ್ಲಿ ಏರ್ ಪೋರ್ಟ್ ರಸ್ತೆಯ ಗಂಗೇನಹಳ್ಳಿ, ಮೇಖ್ರಿ ಸರ್ಕಲ್, ಗುಟ್ಟಹಳ್ಳಿ ಹಾಗೂ ಹೈಗ್ರೌಂಡ್ಸ್ ಬಳಿ ಹೊಯ್ಸಳ ಪೊಲೀಸ್ ವಾಹನಗಳ ಗಸ್ತು ಹೆಚ್ಚಿಸಲಾಗಿದೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸಿಐಡಿ ಕಚೇರಿ ಬಳಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದ್ದು, 2 ಕೆಎಸ್ಆರ್ಪಿ ತುಕಡಿ, 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಸಿಐಡಿ ಕಚೇರಿ ಮುಂದೆ ಬ್ಯಾರಿಕೇಡ್ ಹಾಕಲಾಗಿದೆ.