July 8, 2025
1715177058_1714831755_hd-revanna

ಮೈಸೂರಿನ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯ ನೀಡಿರುವ ಜಾಮೀನು ಪ್ರಶ್ನಿಸಿ ವಿಶೇಷ ತನಿಖಾ ತಂಡ(ಎಸ್‌ಐಟಿ) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಶುಕ್ರವಾರ ಆರೋಪಿ ಶಾಸಕ ಎಚ್ ಡಿ ರೇವಣ್ಣ ಅವರಿಗೆ ತುರ್ತು ನೋಟಿಸ್ ಜಾರಿ ಮಾಡಿದೆ.

ಮಹಿಳೆ ಅಪಹರಣ ಆರೋಪದಡಿ ತಮ್ಮ ವಿರುದ್ಧ ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಕಾನೂನುಬದ್ಧತೆಯನ್ನು ಪ್ರಶ್ನಿಸಿ ರೇವಣ್ಣ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಎಸ್‌ಐಟಿ ಮತ್ತು ದೂರುದಾರರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಎಸ್‌ಐಟಿ ಹಾಗೂ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ಪೀಠ ನೋಟಿಸ್ ಜಾರಿ ಮಾಡಿದೆ.

Leave a Reply

Your email address will not be published. Required fields are marked *