November 22, 2024

ಗುಂಡ್ಲುಪೇಟೆ : ಜೂನ್‌, 02: ಅನೈತಿಕ ಸಂಬಂಧ ವಿಚಾರಕ್ಕೆ ಗಲಾಟೆ ನಡೆದು ಒಡಹುಟ್ಟಿದ ಅಣ್ಣನನ್ನು ತಮ್ಮ ಚಾಕುವಿನಿಂದ ಇರಿದು ಕೊಂದ ಘಟನೆ ಗುಂಡ್ಲುಪೇಟೆ ತಾಲೂಕಿನ‌ ಚೌಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ‌ ಚೌಡಹಳ್ಳಿ ಗ್ರಾಮದ ಪ್ರಸಾದ್ (45) ಕೊಲೆಯಾದ ದುರ್ದೈವಿಯಾಗಿದ್ದು, ಪ್ರಸಾದ್ (39) ಎಂಬಾತ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಅತ್ತಿಗೆಗೆ ಮೈದುನ ಕುಮಾರ್ ನಿರಂತರವಾಗಿ ಅನೈತಿಕ ಸಂಬಂಧ ಇಟ್ಟುಕೊಳ್ಳುವಂತೆ ಪೀಡಿಸುತ್ತಿದ್ದನಂತೆ. ಇದೇ ವಿಚಾರಕ್ಕೆ ಅಣ್ಣ-ತಮ್ಮನ ನಡುವೆ ಗಲಾಟೆ ಆಗಿ ಬೇರೆ-ಬೇರೆ ವಾಸವಾಗಿದ್ದರು. ಇನ್ನು ಶನಿವಾರ (ಜೂನ್‌ 01) ತಡರಾತ್ರಿ ಅಣ್ಣನ ಮನೆಗೆ ಬಂದ ಕುಮಾರ್, ನನ್ನ ಜೊತೆ ಸಂಬಂಧ ಇಟ್ಟುಕೊಳ್ಳದೇ ಬೇರೆಯವರ ಜೊತೆ ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ಜಗಳ ತೆಗೆದು, ತನಗೆ ಬುದ್ಧಿವಾದ ಮಾತುಗಳನ್ನಾಡುತ್ತೀಯ ಎಂದು ಕುಮಾರ್ ಚಾಕುವಿನಿಂದ ಇರಿದು ಅಣ್ಣನನ್ನು ಕೊಂದಿದ್ದಾನೆ.

ಇನ್ನು , ಗುಂಡ್ಲುಪೇಟೆ ಠಾಣೆ ಪೊಲೀಸರು ಆರೋಪಿ ಕುಮಾರನನ್ನು ಬಂಧಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಿದ್ದಾರೆ. ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಮೃತನ ಪತ್ನಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *