September 17, 2024

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್​ ಗೆ ನಡೆಯಲಿರುವ ಚುನಾವಣೆಗೆ ನಾಪಮತ್ರ ಸಲ್ಲಿಸಲು ನಾಳೆ ಕೊನೆದಿನವಾಗಿದ್ದು, ನಾಮಪತ್ರ ಸಲ್ಲಿಸಲು ಕೊನೆ ದಿನಕ್ಕೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಬಿಜೆಪಿಯಿಂದ ಸ್ಪರ್ಧೆಗೆ ಮಾಜಿ ಸಚಿವ ಸಿ.ಟಿ ರವಿ, ಎನ್.ರವಿಕುಮಾರ್ ಮತ್ತು ಎಂ.ಜಿ ಮೂಳೆ ಅವರಿಗೆ ಅವಕಾಶ ಸಿಕ್ಕಿದೆ.

ಒಟ್ಟು 11 ಕ್ಷೇತ್ರಗಳ ಪೈಕಿ ಬಿಜೆಪಿ ಸಂಖ್ಯಾಬಲದ ಆಧಾರದ ಮೇಲೆ ಮೂರು ಸ್ಥಾನಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಿದೆ. ಹೀಗಾಗಿ ಮೂರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಎನ್​ ರವಿ ಕುಮಾರ್ ಅವರಿಗೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ. ಲೋಕಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ಟಿಕೆಟ್ ಮೇಲೆ ಆಸೆಯಿರಿಸಿ ನಿರಾಸೆಯಾಗಿದ್ದ ಸಿಟಿ ರವಿ ಅವರಿಗೆ ಬಂಪರ್ ಗಿಫ್ಟ್​ ಸಿಕ್ಕಿದೆ. ಆದರೆ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಮಂಡ್ಯ ಲೋಕಸಭಾ ಸ್ಥಾನ ತ್ಯಾಗ ಮಾಡಿದ್ದ ಸುಮಲತಾ ಅಂಬರೀಶ್​ಗೆ ಕೊನಗೂ ಅವಕಾಶ ಸಿಕ್ಕಿಲ್ಲ.
ವಿಧಾನಸಭೆ ಚುನಾವಣೆಯಲ್ಲಿ ಸೋಲುಕಂಡಿರುವ ಸಿಟಿ ರವಿ ಅವರನ್ನು ವಿಧಾನ ಪರಿಷತ್​ಗೆ ಕಳುಹಿಸುವ ಬಗ್ಗೆ ವ್ಯಾಪಕ ಚರ್ಚೆ ನಡೆದಿತ್ತು. ಈ ಬಗ್ಗೆ ಪರೋಕ್ಷವಾಗಿ ಇತ್ತೀಚೆಗೆ ಸ್ವತಃ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರೇ ಹೇಳಿದ್ದರು. ಅಲ್ಲದೇ ಕೋರ್​ ಕಮಿಟಿ ಸಭೆಯಲ್ಲೂ ಸಹ ಪಟ್ಟಿಯಲ್ಲಿ ಸಿಟಿ ರವಿ ಹಾಗೂ ಲೋಕಸಭಾ ಟಿಕೆಟ್​ ವಂಚಿತ ಸದಾನಂದಗೌಡ, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವರ ಹೆಸರುಗಳನ್ನು ಸಹ ಹೈಕಮಾಂಡ್​ಗೆ ಕಳುಹಿಸಲಾಗಿತ್ತು. ಅಂತಿಮವಾಗಿ ಹೈಕಮಾಂಡ್​ ಸಿಟಿ ರವಿಗೆ ಅವರಿಗೆ ಅವಕಾಶ ನೀಡಿದೆ.

Leave a Reply

Your email address will not be published. Required fields are marked *