January 25, 2026
IMG_20240603_075744

ಚಾಮರಾಜನಗರ: ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮೈದುನ ಅಣ್ಣನನ್ನೇ ಕೊಲೆ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ನಡೆದಿದೆ. 45 ವರ್ಷದ ಅಣ್ಣನನ್ನು 39 ವರ್ಷದ ತಮ್ಮ ಕೊಲೆ ಮಾಡಿದ್ದಾನೆ. ಆರೋಪಿ ಅಣ್ಣನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವಿಚಾರ ಅಣ್ಣನಿಗೆ ಗೊತ್ತಾಗಿ ಪ್ರಶ್ನಿಸಿದ್ದಾನೆ.
ಅಣ್ಣ, ತಮ್ಮನ ನಡುವೆ ಜಗಳವಾಗಿದ್ದು, ಅಣ್ಣ ಹೊಡೆಯಲು ಬರುತ್ತಿದ್ದಂತೆ ತಮ್ಮ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಗುಂಡ್ಲುಪೇಟೆ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *