ಬೆಂಗಳೂರು: ಸ್ಯಾಂಡಲ್ ವುಡ್ ಸ್ಟಾರ್ ದರ್ಶನ್ ಅವರನ್ನ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು ಕೊಲೆ ಪ್ರಕರಣದಲ್ಲಿ ಬಂಧನ ಮಾಡಲಾಗಿದೆ.ಕೊಲೆ ಪ್ರಕರಣದಲ್ಲಿ ಒಟ್ಟು 10 ಜನರನ್ನು ಬಂಧಿಸಲಾಗಿದ್ದು ಅದರಲ್ಲಿ ದರ್ಶನ್ ಕೂಡ ಒಬ್ಬರಾಗಿದ್ದಾರೆ.
ಚಿತ್ರದುರ್ಗದ ಮೂಲದ ರೇಣುಕಾ ಸ್ವಾಮಿ ಎನ್ನುವ ವ್ಯಕ್ತಿ ದರ್ಶನ್ ಸ್ನೇಹಿತ ಪವಿತ್ರಾ ಗೌಡ ಅವರಿಗೆ ಇನ್ಸ್ಟಾಗ್ರಾಂ ಹಾಗು ಪೇಸ್ ಬುಕ್ ನಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.ಇದೆ ಕಾರಣಕ್ಕೆ ದರ್ಶನ್ ಪ್ಯಾನ್ ಗಳ ಆತನನ್ನು ಚಿತ್ರದುರ್ಗದಿಂದ ಕಿಡ್ನಾಪ್ ಮಾಡಿ ಬೆಂಗಳೂರಿಗೆ ಕರೆತಂದಿದ್ದರು
ನಂತ್ರ RR ನಗರದ ಶೆಡ್ ಒಂದರಲ್ಲಿ ಹಲ್ಲೆ ಮಾಡಿದ್ದರಿಂದ ರೇಣುಕಾ ಸ್ವಾಮಿ ಸಾವನ್ನಪ್ಪಿದ್ದಾನೆ ಎಂದು ಅಂದಾಜು ಮಾಡಲಾಗಿದೆ.ನಂತರ ಶವವನ್ನು ಕಾಮಾಕ್ಷಿಪಾಳ್ಯ ಮೋರಿಯಲ್ಲಿ ಹಾಕಲಾಗಿತ್ತು.ಸದ್ಯ ಇದೆ ವಿಚಾರವಾಗಿ ನಟ ದರ್ಶನ್ ಅವರನ್ನು ಬಂಧಿಸಿ ಬೆಂಗಳೂರಿಗೆ ಕರೆ ತರಲಾಗುತ್ತಿದೆ.