January 13, 2026
1200-675-21705450-thumbnail-16x9-news

ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ. ತಮ್ಮ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗುತ್ತಿದ್ದಂತೆಯೇ ಮಾಜಿ ಸಿಎಂ ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು

ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದು, ಸಹಜವಾಗಿ ಅನಾರೋಗ್ಯದ ಸಮಸ್ಯೆಗಳಿರುತ್ತವೆ. ಅವರು ತನಿಖಾ ತಂಡದ ಎದುರು ಜೂ.17 ರಂದು ಹಾಜರಾಗುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಅವರನ್ನು ಬಂಧಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಇದೇ ವೇಳೆ ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಯಡಿಯೂರಪ್ಪಗೆ ಸೂಚಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಜೂನ್ 15ರೊಳಗೆ ಚಾರ್ಜ್​ಶೀಟ್ ಸಲ್ಲಿಸಬೇಕಿದೆ.

ಹೀಗಾಗಿ ಯಡಿಯೂರಪ್ಪನವರಿಗೆ ವಿಚಾರಣೆಗೆ ಬರುವಂತೆ ನಿನ್ನೆ ಸಿಐಡಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ಇದಕ್ಕೆ ಬಿಎಸ್ ಯಡಿಯೂರಪ್ಪ ಜೂನ್ 17ರಂದು ವಿಚಾರಣೆಗೆ ಹಾಜರಾಗುವುದಾಗಿ ಪತ್ರ ಬರೆದಿದ್ದರು. ವಿಚಾರಣೆಗೆ ಬಿಎಸ್​ ಯಡಿಯೂರಪ್ಪ ಹಾಜರಾಗದ ಹಿನ್ನೆಲೆ ನಿನ್ನೆ ಪೊಲೀಸರು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ​ವಾರಂಟ್ ಹೊರಡಿಸುವಂತೆ ಮನವಿ ಮಾಡಿದ್ದರು.

Leave a Reply

Your email address will not be published. Required fields are marked *