May 20, 2025
WhatsApp Image 2024-06-15 at 12.20.51 PM (1)

ಬೆಂಗಳೂರು: ಹಾವೇರಿ ಲೋಕಸಭಾ ಕ್ಷೇತ್ರದಿಂದ  ಸಂಸದರಾಗಿ ಆಯ್ಕೆಯಾಗಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿಯವರು  ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಂಸತ್ ಸದಸ್ಯರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಶಿಗ್ಗಾವಿ ವಿಧಾನಸಭೆ ಕ್ಷೇತ್ರದ ಶಾಸಕ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದಾರೆ. ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಅವರನ್ನು ಕಚೇರಿಯಲ್ಲಿ ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದರು.

ಈ ವೇಳೆ ಬೊಮ್ಮಾಯಿಯವರಿಗೆ ವಿಪಕ್ಷ ನಾಯಕ ಆರ್.ಅಶೋಕ್, ಶಾಸಕ ಮುನಿರಾಜು, ಜಿಟಿ ದೇವೇಗೌಡ ಹಾಗೂ ಭೋಜೇ ಗೌಡ ಅವರು ಸಾಥ್ ನೀಡಿದರು. ಬಳಿಕ ರಾಜೀನಾಮೆ ಸ್ವೀಕಾರ ಮಾಡಿದ ಸ್ಪೀಕರ್ ಖಾದರ್ ಅವರು ಬೊಮ್ಮಾಯಿಯವರಿಗೆ ಶುಭಕೋರಿದರು

ಇದೀಗ, ಗದಗ-ಹಾವೇರಿ ಕ್ಷೇತ್ರದ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿದ್ದು, ಬೊಮ್ಮಾಯಿ ಅವರ ಜತೆಯಲ್ಲಿ ವಿಧಾನ ಪರಿಷತ್‌ ಸದಸ್ಯ ರವಿಕುಮಾ‌ರ್, ವಿಧಾನಸಭೆ ಪ್ರತಿಪಕ್ಷ ನಾಯಕ ಆ‌ರ್.ಅಶೋಕ, ಶಾಸಕರಾದ ಎಸ್‌. ಮುನಿರಾಜು, ಜೆಡಿಎಸ್‌ ರಾಜ್ಯಾಧ್ಯಕ್ಷ ಜಿ.ಟಿ. ದೇವೇಗೌಡ ಇದ್ದರು.

Leave a Reply

Your email address will not be published. Required fields are marked *