ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಗೊಳಿಸಿ ವಾಹನ ಸವಾರರಿಗೆ ಶಾಕ್ ನೀಡಿದೆ. ಪೆಟ್ರೋಲ್, ಡಿಸೇಲ್ ಮೇಲಿನ ಟ್ಯಾಕ್ಸ್ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಿಟೇಲ್ ಸೇಲ್ಸ್ ಟ್ಯಾಕ್ಸ್ ದರ ಹೆಚ್ಚಳ ಮಾಡಲಾಗಿದೆ.
ಟ್ಯಾಕ್ಸ್ ಹೆಚ್ಚಳ ಹಿನ್ನೆಲೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳವಾಗಿದೆ. ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್- 25.92% ಇದ್ದದ್ದು, ಈಗ 29.84% ಗೆ ಏರಿಕೆ (3.9% ಹೆಚ್ಚಳ)ಯಾಗಿದೆ. ಅಂತೆಯೇ ಡಿಸೇಲ್ ಈ ಹಿಂದೆ- 14.34% ಇದ್ದದ್ದು, ಈಗ 18.44%ಗೆ ಏರಿಕೆ ಕಂಡಿದೆ (4.1% ರಷ್ಟು ಏರಿಕೆ).
ಟ್ಯಾಕ್ಸ್ ಹೆಚ್ಚಳ ಹಿನ್ನೆಲೆ ಪೆಟ್ರೋಲ್ ದರ 100 ರೂಪಾಯಿ ದಾಟಲಿದೆ. ಈಗ ಪೆಟ್ರೋಲ್ ದರ 99.54 ರೂ. ಇದ್ದು, ಮುಂದೆ 102 ರೂಪಾಯಿಗೆ ಏರಿಕೆಯಾಗಲಿದೆ. ಇವತ್ತಿನ ಡೀಸೆಲ್ ದರ 85.93 ರೂಪಾಯಿ ಇದೆ. ಅದು 89.43 ರೂ. ಏರಿಕೆಯಾಗಲಿದೆ.