November 19, 2024

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಐಡಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಮಾರ್ಚ್ 14 ರಂದು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣದ ಹೆಚ್ಚಿನ ತನಿಖೆಗೆ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿ ಆದೇಶ ಮಾಡಿತ್ತು.

ಹೆಚ್ಚಿನ ವಿಚಾರಣೆಗೆ ಬಿಎಸ್‌ವೈಗೆ ಸಿಐಡಿ ನೋಟಿಸ್ ನೀಡಿತ್ತು. ಬಿಎಸ್‌ವೈ ವಿಚಾರಣೆಗೆ ಹಾಜರಾಗಲು ಸಮಯಾವಕಾಶ ಕೇಳಿದ್ದರಿಂದ ಸಿಐಡಿ ವಾರೆಂಟ್ ಜಾರಿ ಮಾಡಿ ಬಂಧನಕ್ಕೆ ಮುಂದಾಗಿತ್ತು. ಈ ವೇಳೆ ಕೋರ್ಟ್ ಬಂಧಿಸದಂತೆ ತಡೆ ನೀಡಿ ಇಂದು ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದರಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತನಿಖೆಗೆ ಇಂದು ಸಿಐಡಿ ಮುಂದೆ ಹಾಜರಾಗಲಿದ್ದಾರೆ.

Leave a Reply

Your email address will not be published. Required fields are marked *